ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, 2026-27ರ ಕೇಂದ್ರ ಬಜೆಟ್ ಭಾರತದ ಅಭಿವೃದ್ಧಿಯ ಆಶೋತ್ತರಗಳನ್ನು ಈಡೇರಿಸುವ ‘ಮಹತ್ವಾಕಾಂಕ್ಷೆಯ ಬಜೆಟ್’ ಎಂದು ಬಣ್ಣಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಬಡವರು, ಕಾರ್ಮಿಕರು ಮತ್ತು ರೈತರ ಹಿತರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ತಯಾರಿಸಿದ ಈ ಭವಿಷ್ಯದ ಹಾಗೂ ಸಂವೇದನಾಶೀಲ ಬಜೆಟ್‌ಗಾಗಿ ನಾನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಅವರ ಇಡೀ ತಂಡವನ್ನು ಅಭಿನಂದಿಸುತ್ತೇನೆ,” ಎಂದು ತಿಳಿಸಿದರು. ಈ ಬಜೆಟ್ ದೇಶದ ಪ್ರತಿಯೊಬ್ಬ ನಾಗರಿಕನ ಕನಸುಗಳಿಗೆ ರೆಕ್ಕೆ ನೀಡುವಂತಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.



