ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.
ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.