ಹೊಸದಿಗಂತ ವರದಿ ಮುಲ್ಕಿ:
ಪಾಕ್ ಬೆಂಬಲಿತ ಉಗ್ರಗಾಮಿಗಳ ಮತ್ತು ಪಿ ಒ ಕೆ ನೆಲೆಗಳಿಗೆ ಭಾರತೀಯ ಸೇನೆಯು “ಅಪರೇಷನ್ ಸಿಂಧೂರ” ಹೆಸರಿನಲ್ಲಿ ನಡೆದ ಸೇನಾ ಕಾರ್ಯಾಚರಣೆಯಿಂದ ಭಯೋತ್ಪಾದಕರ ಶಿಬಿರಗಳ ಮೇಲೆ ನಡೆಸಿದ ದಾಳಿ ಯಶಸ್ವಿಯಾಗಿದೆ. ನಮ್ಮ ಹೆಮ್ಮೆಯ ಸೇನಾ ಯೋಧರಿಗೆ ಒಳಿತಾಗಲಿ, ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನುತುಂಬಲು ಭಾರತೀಯರು ಒಗ್ಗಟ್ಟಾಗಬೇಕು ಎಂದು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಗುರು, ಅಂತರಾಷ್ತ್ರೀಯ ವಾಸ್ತು ತಜ್ಞ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ.
ಅವರು ಮಾಧ್ಯಮದ ಜೊತೆ ಮಾತನಾಡಿ ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಕ್ಕೆ ಬಂದಿದ್ದ 26 ಮಂದಿ ಪ್ರವಾಸಿಗರನ್ನು ಹತ್ಯೆ ಮಾಡಿದ ಪಾಕಿಸ್ತಾನವು ಕಳೆದ ಹಲವು ವರ್ಷಗಳಿಂದ ಉಗ್ರಗಾಮಿಗಳ ಮೂಲಕ ದೇಶದ ಮೇಲೆ ನಿರಂತರ ದಾಳಿ ಮಾಡುತ್ತಿದೆ, ಇದೀಗ ಆಪರೇಷನ್ ಮೂಲಕ ವೈರಿ ಪಾಕಿಸ್ತಾನಕ್ಕೆ ಭಾರತದ ಶಕ್ತಿಯ ಅರಿವಾಗಿದೆ.
ಭಾರತೀಯ ಸೇನೆಯು ಪಾಕಿಸ್ತಾನದ ಸಾಮಾನ್ಯ ನಾಗರಿಕರಿಗೆ ಯಾವುದೇ ಪರಿಣಾಮವಾಗದ ರೀತಿಯಲ್ಲಿ ಪಾಕಿಸ್ತಾನ ಹಾಗೂ ಪಿಒಕೆಯ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಎಚ್ಚರಿಕೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಸ್ಯೆನಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಂಪೂರ್ಣ ಅಧಿಕಾರ ನೀಡಿದ್ದು ಅದರಂತೆ ಕಾರ್ಯಚರಣೆಯಲ್ಲಿ ಭಾಗವಹಿಸಿದ ಎಲ್ಲಾ ಸೈನಿಕರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.