‘ಆಪರೇಷನ್‌ ಸಿಂಧೂರ’ ಎಫೆಕ್ಟ್ : ಬೆಂಗಳೂರು ಏರ್​​ಪೋರ್ಟ್​​ನಲ್ಲಿ 29 ವಿಮಾನ ಹಾರಾಟ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

‘ಆಪರೇಷನ್‌ ಸಿಂಧೂರ’ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ ಎಂದು ಏರ್​​ಪೋರ್ಟ್ ಮೂಲಗಳು ತಿಳಿಸಿವೆ.

ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ನಡೆಸಿದ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಬುಧವಾರ ಮುಂಜಾನೆ ಪಾಕಿಸ್ತಾನ ಹಾಗೂ ಪಾಕ್​ ಅಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ತಾಣಗಳ ಮೇಲೆ ದಾಳಿ ನಡೆಸಿತ್ತು. ಹೀಗಾಗಿ, ಕೆಲವಾಯುಯಾನ ಪ್ರದೇಶದಲ್ಲಿ ಹಾರಾಟಕ್ಕೆ ನಿರ್ಬಂಧ ಇರುವುದರಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 29 ವಿಮಾನಗಳ ಹಾರಾಟ ರದ್ದಾಗಿದೆ.

ಇಂಡಿಗೋ ವಿಮಾನಯಾನ ಸಂಸ್ಥೆಯ 10 ವಿಮಾನಗಳ ಆಗಮನ 9 ನಿರ್ಗಮನ, ಏರ್ ಇಂಡಿಯಾ ಎಕ್ಸ್ ಪ್ರೆಸ್​​ನ 3 ಆಗಮನ 3 ನಿರ್ಗಮನ ಮತ್ತು ಏರ್ ಇಂಡಿಯಾದ 2 ಆಗಮನ 2 ನಿರ್ಗಮನ ವಿಮಾನಗಳ ಹಾರಾಟ ರದ್ದುಗೊಂಡಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಈ ಕುರಿತು ತನ್ನ ಎಕ್ಸ್ ಖಾತೆಯಲ್ಲಿ ಪ್ರಯಾಣಿಕರಿಗೆ ಮಾಹಿತಿ ನೀಡಿದೆ. ‘ಕೆಲ ವಾಯುಯಾನ ಪ್ರದೇಶಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಜಾರಿಯಲ್ಲಿದೆ. ಇದು ನಮ್ಮ ಸಂಪರ್ಕ‌ ಜಾಲದಲ್ಲಿನ ಕೆಲವು ವಿಮಾನಗಳ ಸೇವೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುನ್ನ, ತಾವು ಪ್ರಯಾಣ ಮಾಡಲಿರುವ ವಿಮಾನಗಳ ವೇಳಾಪಟ್ಟಿಗಳ ಕುರಿತು ಆಯಾ ವಿಮಾನಯಾನ ಸಂಸ್ಥೆಗಳ ಜೊತೆಗೆ ಸಂಪರ್ಕಿಸಿ, ಪರಿಶೀಲಿಸಿಕೊಳ್ಳಬೇಕು” ಎಂದು ಪ್ರಯಾಣಿಕರಿಗೆ ವಿನಂತಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!