ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿದ ಬೆನ್ನಲ್ಲೇ ಯಶ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.
ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಅಚಲ ಶಕ್ತಿ ಮತ್ತು ಕಾರ್ಯಕ್ಕೆ ಧನ್ಯವಾದಗಳು. ಭಾರತೀಯ ಯೋಧರ ಸೇವೆಗೆ ಧನ್ಯವಾದ ತಿಳಿಸುವುದರ ಜೊತೆಗೆ ಒಗ್ಗಟ್ಟಿನಿಂದ ನಿಂತು ಜವಾಬ್ದಾರಿಯುತವಾಗಿ ವರ್ತಿಸೋಣ. ಸಾಮಾಜಿಕ ಜಾಲತಾಣದಲ್ಲಿ ಯಾವುದಾದರೂ ವಿಚಾರ ಹಂಚಿಕೊಳ್ಳುವ ಮುನ್ನ ಮೊದಲು ಪರಿಶೀಲಿಸ. ತಪ್ಪು ಮಾಹಿತಿಯ ವಿರುದ್ಧ ನಿಲ್ಲೋಣ. ಜೈ ಹಿಂದ್ ಎಂದು ಯಶ್ ಬರೆದುಕೊಂಡಿದ್ದಾರೆ.