ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಮತ್ತು ಭಾರತದ ನಡುವೆ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದ್ದು, ಭಾರತದೊಂದಿಗಿನ ಯುದ್ಧದಲ್ಲಿ ನಾವು ಉಳಿಯುವುದಿಲ್ಲ ಎಂದು ಪಾಕ್ ನಿವೃತ್ತ ಏರ್ ಮಾರ್ಷಲ್ ಮಸೂದ್ ಅಖ್ತರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಭಾರತದ ಪ್ರತಿದಾಳಿಗೆ ಪಾಕಿಸ್ತಾನ ನಡುಗಿ ಹೋಗಿದೆ. ಇದರ ಬೆನ್ನಲ್ಲೇ ಪಾಕ್ ಮಾಜಿ ಏರ್ ಮಾರ್ಷಲ್ ಮಸೂದ್ ಅಖ್ತರ್ ಭಾರತದೊಂದಿಗೆ ಯುದ್ಧ ಮಾಡಿದರೆ ನಮಗೆ ಉಳಿಗಾಲವಿಲ್ಲ ಎಂದು ತಿಳಿಸಿದ್ದಾರೆ.
ಭಾರತದಲ್ಲಿ 16 ಲಕ್ಷ ಸೈನಿಕರಿದ್ದಾರೆ. ಆದರೆ ನಮ್ಮಲ್ಲಿ ಬರೀ 6 ಲಕ್ಷವಷ್ಟೇ ಸೈನಿಕರಿದ್ದಾರೆ. ಹಾಗಾಗಿ ಭಾರತದೊಂದಿಗಿನ ಯಾವುದೇ ಯುದ್ಧವು ನಮ್ಮನ್ನು ಉಳಿಸುವುದಿಲ್ಲ ಎಂದು ವ್ಯಕ್ತಪಡಿಸಿದ್ದಾರೆ.