ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಶೆಲ್ ದಾಳಿಯಲ್ಲಿ ಆಂಧ್ರ ಪ್ರದೇಶದ ಸೈನಿಕ ಮುರಳಿ ನಾಯಕ್ ಹುತಾತ್ಮರಾಗಿದ್ದಾರೆ.
ಆಂಧ್ರ ಪ್ರದೇಶಕ್ಕೆ ಸೇರಿದ ಕಲ್ಲಿಕೊಂಡ್ಲ ಗ್ರಾಮದ ಶ್ರೀರಾಮುಲು ನಾಯಕ್ ಹಾಗೂ ಜ್ಯೋತಿಬಾಯಿರವರ ಏಕೈಕ ಪುತ್ರ ಯೋಧ ಮುರಳಿ ನಾಯಕ್ ವೀರ ಮರಣ ಹೊಂದಿದ್ದಾರೆ.
ಇಂಡಿಗೋ ವಿಮಾನದ ಮೂಲಕ ದೆಹಲಿಯಿಂದ ಕೆಐಎಬಿಗೆ ಯೋಧನ ಪಾರ್ಥಿವ ಶರೀರ ಆಗಮನವಾಗಿದೆ. ಏರ್ಪೋರ್ಟ್ನ ಕಾರ್ಗೋ ಟರ್ಮಿನಲ್ನಲ್ಲಿ ಯೋಧರು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತಿಮ ನಮನ ಸಲ್ಲಿಸಿದ ಬಳಿಕ ರಸ್ತೆ ಮೂಲಕ ಸೇನಾ ವಾಹನದಲ್ಲಿ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತಿದೆ.
ಸದ್ಯಕ್ಕೆ ಮುರಳಿ ನಾಯಕ್ ಹುಟ್ಟೂರು ಕಲ್ಲಿತಾಂಡಾ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.