ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 36ಕ್ಕೂ ಅಧಿಕ ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಹಲವರು ಮೃತಪಟ್ಟಿದ್ದಾರೆ, ಕಾಡಿನ ಬೆಂಕಿಗೆ ಎರಡು ಹಸುಗಳು ಮತ್ತು ಮೂರು ಮೇಕೆಗಳು ಸುಟ್ಟು ಕರಕಲಾಗಿವೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.
ಜ್ವಾಲೆಗಳು ಎಷ್ಟು ತೀವ್ರವಾಗಿತ್ತೆಂದರೆ ಅದು ಇದ್ದಕ್ಕಿದ್ದಂತೆ ದೈತ್ಯಾಕಾರದ ರೂಪವನ್ನು ಪಡೆದುಕೊಂಡಿತು ಮತ್ತು ಮನೆಗಳಲ್ಲಿ ಇರಿಸಲಾಗಿದ್ದ ಒಂದೇ ಒಂದು ವಸ್ತುವನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.
ಅವಘಡದ ಮಾಹಿತಿ ತಿಳಿದ ಕೂಡಲೇ ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದವು. ಬೆಂಕಿಯ ಭೀಕರ ರೂಪವನ್ನು ನೋಡಿ ಮತ್ತೆರೆಡು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕರೆಸಲಾಯಿತು. ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದು, ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.