ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಪಾಕಿಸ್ತಾನ ಕದನ ವಿರಾಮ ಒಪ್ಪಂದ ಘೋಷಿಸಿದ ನಂತರ ಪ್ರಧಾನಿ ಮೋದಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಆಪರೇಷನ್ ಸಿಂದೂರ ಮತ್ತು ಕದನ ವಿರಾಮದ ಬಗ್ಗೆ ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಿದ್ದಾರೆ.
ಪತ್ರದಲ್ಲೇನಿದೆ?
ಆತ್ಮೀಯ ಪ್ರಧಾನ ಮಂತ್ರಿಯವರೇ, ಸಂಸತ್ತಿನ ವಿಶೇಷ ಅಧಿವೇಶನವನ್ನು ತಕ್ಷಣವೇ ಕರೆಯಬೇಕೆಂಬ ವಿರೋಧ ಪಕ್ಷದ ಸರ್ವಾನುಮತದ ವಿನಂತಿಯನ್ನು ನಾನು ಪುನರುಚ್ಚರಿಸುತ್ತೇನೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆಯಿತು. ಪ್ರತೀಕಾರವಾಗಿ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಯಿತು. ಆದರೆ, ಇಂದಿನ ಕದನ ವಿರಾಮವನ್ನು ಅಮೆರಿಕ ಅಧ್ಯಕ್ಷ ಟ್ರಂಪ್ ಮೊದಲು ಘೋಷಿಸಿದರು. ಇದು ಮುಂಬರುವ ಸವಾಲುಗಳನ್ನು ಎದುರಿಸಲು ನಮ್ಮ ಸಾಮೂಹಿಕ ಸಂಕಲ್ಪವನ್ನು ಪ್ರದರ್ಶಿಸಲು ಒಂದು ಅವಕಾಶವಾಗಿದೆ. ನೀವು ಈ ಬೇಡಿಕೆಯನ್ನು ಗಂಭೀರವಾಗಿ ಮತ್ತು ತ್ವರಿತವಾಗಿ ಪರಿಗಣಿಸುತ್ತೀರಿ ಎಂದು ನಾನು ನಂಬುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇತ್ತ ಕಾಂಗ್ರೆಸ್ ಮುಖ್ಯಸ್ಥ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ಪ್ರಧಾನಿಗೆ ಪತ್ರ ಬರೆದಿದ್ದಾರೆ.