September 30, 2026
Wednesday, September 30, 2026
spot_img

400 ಕೋಟಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರ ಮುಂದೆ ಆರೋಪಿ ಸರೆಂಡರ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾವಳೆ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಪ್ರಕರಣದಲ್ಲಿ ದೂರುದಾರರಾಗಿರುವ ಸಂದೀಪ್ ಪಾಟೀಲ್ ಕಿಡ್ನ್ಯಾಪ್ ಮತ್ತು 400 ಕೋಟಿ ರೂ. ದರೋಡೆ ಸಂಬಂಧಿತ ಅಂಶಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ಸಂಭಾಷಣೆಗಳನ್ನ ಎಸ್‌ಐಟಿ ಪರಿಶೀಲನೆಗೆ ತೆಗೆದುಕೊಂಡಿದೆ.

ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಬಿಲ್ಡರ್ ಕಿಶೋರ್ ಸಾವಳಾ, ನಾಸಿಕ್ ತಾಲೂಕಿನ ಘೋಷಿ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ಶನಿವಾರ ಸಂಜೆಯೇ ಕಿಶೋರ್‌ನನ್ನು ವಶಕ್ಕೆ ಪಡೆದಿರುವ ಎಸ್‌ಐಟಿ (SIT) ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈತನ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಒಂದೆಡೆ ತನಿಖೆ ಚುರುಕುಗೊಂಡಿದ್ದರೆ, ಇನ್ನೊಂದೆಡೆ ದೂರುದಾರ ಸಂದೀಪ್ ಪಾಟೀಲ್ ಎಸ್‌ಐಟಿ ಪೊಲೀಸರ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣವನ್ನು ಮುಚ್ಚಿಹಾಕಲು ಪೊಲೀಸರು ಸಂಚು ರೂಪಿಸುತ್ತಿದ್ದಾರೆ ಎಂದು ಅವರು ಫೇಸ್‌ಬುಕ್ ಪೋಸ್ಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

Must Read