ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕ್ ಶೆಲ್ ದಾಳಿಯಲ್ಲಿ ಹುತಾತ್ಮರಾದ ಮುರಳಿ ನಾಯಕ್ ಅಂತಿಮ ದರುಶನಕ್ಕೆ ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಕೂಡ ಗೌರವ ಸಲ್ಲಿಸಿದರು.
ಈ ಬಗ್ಗೆ ಮಾತಾಡಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್, ಹುತಾತ್ಮ ಮುರಳಿ ನಾಯಕ್ ಕುಟುಂಬಕ್ಕೆ 50 ಲಕ್ಷ ರೂಪಾಯಿ 5 ಎಕರೆ ಜಮೀನು ನೀಡಲು ನಿರ್ಧರಿಸಿದೆ. ಆಂಧ್ರಪ್ರದೇಶದ ಸರ್ಕಾರದ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ನನ್ನ ವೈಯಕ್ತಿಕವಾಗಿ 25 ಲಕ್ಷ ರೂಪಾಯಿ ನೀಡುತ್ತಿದ್ದೇನೆ ಎಂದಿದ್ದಾರೆ.
ಪಾಕಿಸ್ತಾನ ಗಡಿಯಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಸಮೀಪದ ಆಂಧ್ರಪ್ರದೇಶಕ್ಕೆ ಸೇರಿದ ಕಲ್ಲಿಕೊಂಡ್ಲ ಗ್ರಾಮದ ಶ್ರೀರಾಮುಲು ನಾಯಕ್ ಹಾಗೂ ಜ್ಯೋತಿಬಾಯಿರವರ ಏಕೈಕ ಪುತ್ರ ಯೋಧ ಮುರಳಿ ನಾಯಕ್ ಹುತಾತ್ಮರಾಗಿದ್ದಾರೆ.