ಹೊಸದಿಗಂತ ಡಿಜಿಟಲ್ ಡೆಸ್ಕ್:
ಕದನ ವಿರಾಮದ ಬಳಕವೂ ಭಾರತದ ವಿರುದ್ಧ ಆಟಟೋಪ ನಡೆಸುತ್ತಿರುವ ಪಾಕಿಸ್ತಾನಕ್ಕೆ ಬಲೂಚಿಸ್ತಾನ ಹೋರಾಟಗಾರರು ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ.
ಭಾರತಕ್ಕೆ ಬೆಂಬಲ ಘೋಷಿಸಿದ್ದ ಬಲೂಚ್ ಲಿಬರೇಶನ್ ಆರ್ಮಿ ಪಾಕಿಸ್ತಾನದ 51ಕ್ಕೂ ಹೆಚ್ಚು ಸ್ಥಳಗಳ ಮೇಲೆ ಏಕಾಏಕಿ ದಾಳಿ ನಡೆಸಿದೆ. ಪಾಕಿಸ್ತಾನಿ ಮಿಲಿಟರಿ ಮತ್ತು ಗುಪ್ತಚರ ತಾಣಗಳನ್ನು ಗುರಿಯಾಗಿಸಿಕೊಂಡು 51ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿರುವುದಾಗಿ ಬಿಎಲ್‌ಎ ಅಧಿಕೃತವಾಗಿ ಹೇಳಿಕೊಂಡಿದೆ.
ಬಿಎಲ್‌ಎ ವಕ್ತಾರ ಜಿಯಾಂಡ್ ಬಲೋಚ್ ನೀಡಿದ ಮಾಹಿತಿ ಪ್ರಕಾರ, ಈ ವಾರದ ಆರಂಭದಲ್ಲಿ ಭಾರತ-ಪಾಕಿಸ್ತಾನ ಮಿಲಿಟರಿ ಉದ್ವಿಗ್ನತೆ ತೀವ್ರತೆ ಪಡೆದುಕೊಂಡಿತ್ತು. ಇದರ ಸದುಪಯೋಗ ಪಡೆದುಕೊಂಡು ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನದ 51ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಲವು ಗಂಟೆಗಳ ಕಾಲ ದಾಳಿ ನಡೆಸಿದೆ ಎಂದು ಹೇಳಿದ್ದಾರೆ.