ಸಿಇಟಿ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌: ಮೊಬೈಲ್ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ಹೊಸ ಮೊಬೈಲ್ ಆ್ಯಪ್ ಮತ್ತು ಪೋರ್ಟಲ್ ಅನ್ನು ಬಿಡುಗಡೆ ಮಾಡಿದೆ.

ಇನ್ಮುಂದೆ ಸಿಇಟಿ ಅರ್ಜಿ ಸಲ್ಲಿಸಲು ಸೈಬರ್​​ ಸೆಂಟರ್​ಗೆ ಹೋಗಬೇಕಾಗಿಲ್ಲ. ಮೊಬೈಲ್ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸೈಬರ್ ಸೆಂಟರ್​​ನಲ್ಲಿ ತಪ್ಪಾಗಿ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳು ಪರದಾಡುತ್ತಿದ್ದರು. ಇದೇ ಕಾರಣದಿಂದ ಅರ್ಹರಿಗೆ ಸಿಇಟಿ ಸೀಟ್​ ಮಿಸ್ ಆಗುತ್ತಿತ್ತು. ಹಾಗಾಗಿ ಕೆಇಎ ಮೊಬೈಲ್ ಆ್ಯಪ್, ಚಾಟ್ ಬಾಟ್ ಮತ್ತು ಪೊರ್ಟಲ್​​ ಅನ್ನು ಬಿಡುಗಡೆ ಮಾಡಿದೆ.

ಹೊಸ ಮೊಬೈಲ್​ ಆ್ಯಪ್​ನಿಂದ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ.​​ ಸಿಇಟಿ ಪರೀಕ್ಷೆಯ ಸಮಸ್ಯೆಗಳು, ಕಾಲೇಜುಗಳ ಸಮಗ್ರ ಮಾಹಿತಿ, ಆಯ್ಕೆ ಮಾಡುವ ಇಂಜಿನೀಯರಿಂಗ ಕಾಲೇಜು ಶುಲ್ಕ ಎಷ್ಟು? ಆ ಕಾಲೇಜಿನಲ್ಲಿ ಹಾಸ್ಟೇಲ್ ಶುಲ್ಕ ಏನಿದೆ? ಇತರೇ ಸೌಲಭ್ಯಗಳು ಏನಿದೆ ಎಂದು ಹಲವಾರು ಪ್ರಶ್ನೆಗಳಿಗೆ ಆ್ಯಪ್ ನಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!