ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದಲ್ಲಿರುವ ಭಯೋತ್ಪಾದಕರು ಈಗ ಧರ್ಮಗುರುಗಳಾಗಿದ್ದಾರೆ ಎಂದು ಪಾಕಿಸ್ತಾನ ಸಚಿವ ಖವಾಜಾ ಆಸಿಫ್ ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ್ದ ಸಚಿವ ಖವಾಜಾ ಆಸಿಫ್, ಪಾಕಿಸ್ತಾನ ಸರ್ಕಾರ ಭಯೋತ್ಪಾದನೆ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿದೆಯಾ? ಪಾಕ್‌ನಲ್ಲಿ ಭಯೋತ್ಪಾದಕರು ಮತ್ತು ಉಗ್ರ ನಾಯಕರು ಸಕ್ರೀಯವಾಗಿದ್ದಾರಾ? ಎಂಬೆಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಪಾಕಿಸ್ತಾನದಲ್ಲಿರುವ ಎಲ್ಲಾ ಭಯೋತ್ಪಾದಕರನ್ನು ಈಗ ಸಂಪೂರ್ಣ ಶುಚಿಯಾಗಿದ್ದಾರೆ, ಇದರಲ್ಲಿ ಹೆಚ್ಚಿನವರು ಧಾರ್ಮಿಕ ಮುಖಂಡರಾಗಿದ್ದಾರೆ. ಅವರೆಲ್ಲರು ಇನ್ಮುಂದೆ ಪಾಕಿಸ್ತಾನದಲ್ಲಾಗಲಿ ಅಥವಾ ಭಾರತದ ಗಡಿಯಾಚೆ ಆಗಲಿ ಉಗ್ರ ಕೃತ್ಯಗಳನ್ನು ಎಸಗುವುದಿಲ್ಲ. ಏಕೆಂದರೆ ಪಾಕಿಸ್ತಾನವು ಇನ್ಮುಂದೆ ಸಕ್ರಿಯ ಭಯೋತ್ಪಾದಕರು ಅಥವಾ ಭಯೋತ್ಪಾದಕ ಸಂಘಟನೆಗಳಿಗೆ ಆಶ್ರಯ ನೀಡಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಉಗ್ರ ಸಂಘಟನೆಗಳ ಪೋಷಣೆಯಲ್ಲಿ ಅಮೆರಿಕದ ಪಾತ್ರ ವಿವರಿಸಿದ ಆಸಿಫ್, ಭಯೋತ್ಪಾದಕ ಸಂಘಟನೆಗಳಿಗೆ ತರಬೇತಿ ನೀಡುವ ಮತ್ತು ಹಣಕಾಸು ಒದಗಿಸುವ ಕೆಲಸವನ್ನು ಪಾಕಿಸ್ತಾನ ಮಾಡುತ್ತಿಲ್ಲ. ಕಳೆದ ಮೂರು ದಶಕಗಳಿಂದಲೂ ಅಮೆರಿಕಾಗೋಸ್ಕರ (USA) ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.