ಹೊಸದಿಗಂತ ಡಿಜಿಟಲ್ ಡೆಸ್ಕ್:
ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾದ ಬಳಿಕ ತಂಡದ ಟೆಸ್ಟ್ ನಾಯಕತ್ವದ ಪಟ್ಟವನ್ನು ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ನಿರಾಕರಿಸಿದ್ದಾರೆ ಎನ್ನಲಾಗಿದೆ. ಬುಮ್ರಾ ಈ ಜವಾಬ್ದಾರಿಯಿಂದ ಹಿಂದೆ ಸರಿದಿರುವುದು ಭಾರತೀಯ ಕ್ರಿಕೆಟ್‌ನಲ್ಲಿ ಗಮನಾರ್ಹ ಬದಲಾವಣೆಯ ಸೂಚನೆಯಾಗಿದೆ.
ಖಾಸಗಿ ಸ್ಪೋರ್ಟ್ಸ್ ಮಾಧ್ಯಮದ ವರದಿಯ ಪ್ರಕಾರ, ಬುಮ್ರಾ ತಮ್ಮ ಗಾಯದ ಹಿನ್ನಲೆ ಮತ್ತು ಕೆಲಸದ ಒತ್ತಡದಿಂದಾಗಿ ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯ ಎಲ್ಲಾ ಪಂದ್ಯಗಳಲ್ಲಿ ಆಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ಕಾರಣದಿಂದ ಅವರು ಟೆಸ್ಟ್ ನಾಯಕತ್ವದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಒಪ್ಪಿರಲಿಲ್ಲ ಎಂದು ವರದಿಯಾಗಿದೆ.
ಹಲವಾರು ಮಾಧ್ಯಮ ವರದಿಗಳ ಪ್ರಕಾರ, ಶುಭ್ಮನ್ ಗಿಲ್ ಭಾರತ ತಂಡದ ಮುಂದಿನ ಟೆಸ್ಟ್ ನಾಯಕನಾಗಿ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದ್ದು ಶೀಘ್ರದಲ್ಲೇ ಇಂಗ್ಲೆಂಡ್ ಪ್ರವಾಸಕ್ಕೆ ತಂಡ ಘೋಷಣೆಯೊಂದಿಗೆ ಶುಭ್ಮನ್ ಗಿಲ್ ನಾಯಕತ್ವದ ನೇಮಕವನ್ನು ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ.