ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್‌ನ ಅಮೃತಸರದ ಐದು ಗ್ರಾಮಗಳಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಲಾಗಿದೆ.
ಕಳ್ಳಭಟ್ಟಿ ಸೇವನೆಯಿಂದ ಅಸ್ವಸ್ಥಗೊಂಡ ಆರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಎಂಬ ಐದು ಗ್ರಾಮಗಳಲ್ಲಿ ಸಾವುಗಳು ಸಂಭವಿಸಿವೆ. ಅಮೃತಸರ ಉಪ ಆಯುಕ್ತೆ ಸಾಕ್ಷಿ ಸಾಹ್ನಿ ಮಾತನಾಡಿ 14 ಮಂದಿ ಸಾವನ್ನು ದೃಢಪಡಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆ ಮತ್ತು ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಬಗ್ಗೆ ತಿಳಿದುಬಂದ ಕೂಡಲೇ ಮದ್ಯ ಸೇವಿಸಿದ ಮತ್ತು ಅನಾರೋಗ್ಯದಿಂದ ಬಳಲುತ್ತಿರುವವರನ್ನು ಚಿಕಿತ್ಸೆಗೆ ಕಳುಹಿಸಬೇಕು ಎಂದು ಗುರುದ್ವಾರಗಳಲ್ಲಿ ಘೋಷಣೆಗಳನ್ನು ಮಾಡಲಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.