ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕ್ರಿಕೆಟ್ ಸೂಪರ್ಸ್ಟಾರ್ ವಿರಾಟ್ ಕೊಹ್ಲಿ ಅವರು ಟೆಸ್ಟ್ ಸರಣಿಯಿಂದ ನಿವೃತ್ತಿ ಘೋಷಿಸಿದ ಒಂದು ದಿನದ ನಂತರ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಉತ್ತರ ಪ್ರದೇಶದ ವೃಂದಾವನಕ್ಕೆ ಭೇಟಿ ನೀಡಿದರು.
ಈ ದಂಪತಿಗಳು ತಮ್ಮ ಆಧ್ಯಾತ್ಮಿಕ ಗುರು ಪ್ರೇಮಾನಂದ ಮಹಾರಾಜ್ ಅವರ ಆಶೀರ್ವಾದ ಪಡೆಯಲು ವೃಂದಾವನ ಧಾಮಕ್ಕೆ ತೆರಳಿದರು. ವಿರಾಟ್ ಮತ್ತು ಅನುಷ್ಕಾ ಹಲವು ವರ್ಷಗಳಿಂದ ಪ್ರೇಮಾನಂದ ಮಹಾರಾಜ್ ಅವರನ್ನು ನಿಕಟವಾಗಿ ಅನುಸರಿಸುತ್ತಿದ್ದಾರೆ.
ಪ್ರೇಮಾನಂದ ಮಹಾರಾಜ್ ಅವರ ಭೇಟಿಯು ದಂಪತಿಗಳ ಆಧ್ಯಾತ್ಮಿಕ ಭಕ್ತಿ ಮತ್ತು ವಿನಮ್ರ ವ್ಯಕ್ತಿತ್ವವ ಮತ್ತೊಮ್ಮೆ ಗಮನ ಸೆಳೆದಿದೆ.