ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯ ಹಲವೆಡೆ ಇಂದು ಮಳೆರಾಯನ ಆರ್ಭಟ ಜೋರಾಗಿದೆ. ಬಿರುಗಾಳಿ, ಆಲಿಕಲ್ಲು ಸಹಿತ ಮಳೆಗೆ ರಸ್ತೆಗಳೆಲ್ಲ ಕಾಲುವೆಯಂತಾಗಿದೆ. ನಗರದ ವಿವಿಧೆಡೆ ಮರಗಳು ಉರುಳಿ ಬಿದ್ದು ಹಲವು ಅವಾಂತರಗಳು ಸೃಷ್ಟಿಯಾಗಿದೆ.
ನಗರದ ಬಾಣಸವಾಡಿ, ಕಲ್ಯಾಣನಗರದಲ್ಲಿ ಬಿರುಗಾಳಿ ಜೊತೆಗೆ ಆಲಿಕಲ್ಲು ಮಳೆ ಸುರಿದಿದೆ. ಮಾನತ್ಯಾ ಟೆಕ್ ಪಾರ್ಕ್‌ನಲ್ಲಿ ಜೋರು ಮಳೆಯಾಗಿದ್ದು, ರಸ್ತೆಯಲ್ಲಿ ನೀರು ನಿಂತ ಪರಿಣಾಮ ಟ್ರಾಫಿಕ್ ಜಾಮ್ ಆಗಿದೆ.
ಹೆಚ್‌ಬಿಆರ್ ಲೇಔಟ್‌ನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ವಾಹನಗಳು ಜಖಂ ಆಗಿದೆ. ನಿರಂತರ ಮಳೆಗೆ ರಸ್ತೆ ತುಂಬೆಲ್ಲಾ ನೀರು ನಿಂತಿದ್ದು, ವಾಹನ ಸವಾರರು ಪರದಾಡಿದ್ದಾರೆ.