ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಂಶಿ ಹೊಸೂರು ಗ್ರಾಮದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತಪಟ್ಟವರನ್ನು ಮಾಲತೇಶ(19), ಬಸವರಾಜ್(38) ಎಂದು ಗುರುತಿಸಲಾಗಿದೆ. ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಮಾಲತೇಶ ರಕ್ಷಣೆಗೆ ಹೋದ ಬಸವರಾಜ್ ಸೇರಿ ಇಬ್ಬರೂ ನೀರಿನಿಂದ ಹೊರಬರಲಾರದೇ ಮೃತಪಟ್ಟಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಚರಣೆ ನಡೆಸಿ, ಮಾಲತೇಶ ಶವ ಮೇಲಕ್ಕೆತ್ತಿದ್ದಾರೆ. ಬಸವರಾಜ್ ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದು, ಹಾನಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.