ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಪರೇಷನ್ ಸಿಂಧೂರದ ಕಾರ್ಯಾಚರಣೆ ವೇಳೆ ಪಾಪಿ ಪಾಕ್‌ನಿಂದ ಬರುತ್ತಿದ್ದ ಕ್ಷಿಪಣಿಗಳನ್ನು ಧ್ವಂಸಗೈದು ಭಾರತವನ್ನು ರಕ್ಷಿಸಿದ್ದ S-400 ವಾಯು ರಕ್ಷಣಾ ಕ್ಷಿಪಣಿಗೆ ಬೇಡಿಕೆ ಹೆಚ್ಚಾಗಿದೆ.
ಭಾರತ ಮತ್ತಷ್ಟು ಹೆಚ್ಚುವರಿ ಘಟಕಗಳನ್ನು ನೀಡುವಂತೆ ಮನವಿ ಮಾಡಿದೆ ಎಂದು ವರದಿಯಾಗಿದೆ.
ಪಾಕಿಸ್ತಾನದ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ತಟಸ್ಥಗೊಳಿಸುವಲ್ಲಿ ಎಸ್ 400 ನಿರ್ಣಾಯಕ ಪಾತ್ರ ವಹಿಸಿತ್ತು. ಎಸ್ -400 ಕಾರ್ಯಕ್ಷಮತೆಯಿಂದ ತೃಪ್ತಿ ಹೊಂದಿದ ಭಾರತವು ರಷ್ಯಾದಿಂದ ಹೆಚ್ಚಿನ ಘಟಕಗಳನ್ನು ಪಡೆಯುವ ಮೂಲಕ ತನ್ನ ವಾಯು ರಕ್ಷಣಾ ಸಾಮರ್ಥ್ಯಗಳನ್ನು ವಿಸ್ತರಿಸಲು ಮುಂದಾಗಿದೆ.