ಭಾರತಕ್ಕೆ ಮತ್ತೊಂದು ಗೆಲುವು: ಪಾಕ್​ನಿಂದ ಬಂಧನಕ್ಕೊಳಗಾಗಿದ್ದ ಬಿಎಸ್​ಎಫ್​ ಯೋಧ ಭಾರತಕ್ಕೆ ವಾಪಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆಪರೇಷನ್ ಸಿಂದೂರ ಕಾರ್ಯಾಚರಣೆ ಸಕ್ಸಸ್ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು ಸಿಕ್ಕಿದೆ. ಪಾಕಿಸ್ತಾನ ಬಂಧಿಸಿದ್ದ ಬಿಎಸ್‌ಎಫ್ ಯೋಧ ಭಾರತಕ್ಕೆ ವಾಪಸ್ ಆಗಿದ್ದಾರೆ.

ಆಕಸ್ಮಿಕವಾಗಿ ಫಿರೋಜ್‌ಪುರ ವಲಯದಲ್ಲಿ ಗಡಿ ದಾಟಿದ್ದ ಬಿಎಸ್‌ಎಫ್ ಯೋಧನನ್ನು ಬಂಧಿಸಿದ್ದ ಪಾಕ್ ರೇಂಜರ್‌ಗಳು 20 ದಿನಗಳ ಬಳಿಕ ಇಂದು ಅಟ್ಟಾರಿ ಗಡಿ ಮೂಲಕ ಬಿಡುಗಡೆಗೊಳಿಸಿದೆ.

ಬಿಎಸ್‌ಎಫ್ ಮಾಹಿತಿ ಪ್ರಕಾರ, ಇಂದು ಬೆಳಗ್ಗೆ 10:30ರ ಸುಮಾರಿಗೆ ಅಟ್ಟಾರಿ – ವಾಘಾ ಗಡಿಯಲ್ಲಿ ಬಿಎಸ್‌ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬಿಡುಗಡೆಗೊಳಿಸಿದೆ.

ಏ.23ರಂದು ಪಂಜಾಬ್‌ನ ಫಿರೋಜ್‌ಪುರ ಬಳಿ ಆಕಸ್ಮಿಕವಾಗಿ ಅಂತರರಾಷ್ಟ್ರೀಯ ಗಡಿಯನ್ನು ದಾಟಿದ್ದ 182ನೇ ಬೆಟಾಲಿಯನ್ ಕಾನ್‌ಸ್ಟೇಬಲ್ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದರು.

 

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!