ಹೊಸದಿಗಂತ ಡಿಜಿಟಲ್
ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈಗೆ ಮುಂದೂಡಿ ಆದೇಶಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಹಾಗೂ ಸಿಬಿಐ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಸುಪ್ರೀಂ ಕೋರ್ಟ್ ನಲ್ಲಿ ಸಿಬಿಐ ಪರವಾಗಿ ಎ ಎಸ್ ಜಿ ಎಸ್. ವಿ ರಾಜು ಅವರು ವಾದ ಮಂಡಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ರಾಜಕೀಯವಾಗಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಸಚಿವ ಸಂಪುಟದ ಭಾಗವಾಗಿದ್ದಾರೆ. ಭ್ರಷ್ಟಾಚಾರ ಪ್ರಕರಣ ಹೊರ ಬಿದ್ದಿದೆ. ಅಧಿಕಾರದ ದುರುಪಯೋಗ ಇಲ್ಲಿ ಒಂದು ಸಮಸ್ಯೆಯಾಗಿದೆ ಎಂದು ಸುಪ್ರೀಂ ಕೋರ್ಟ್ ನಲ್ಲಿ ಸಿಬಿಐ ಪರವಾಗಿ ಎಎಸ್ಜಿ ಎಸ್ ವಿ ರಾಜು ಅವರು ವಾದ ಮಂಡಿಸಿದರು.
ಬಳಿಕ ಡಿಕೆ ಶಿವಕುಮಾರ್ ಪರವಾಗಿ ವಕೀಲ ಅಭಿಷೇಕ್ ಮನು ಸಿಂಘವಿ ಅವರು ವಾದ ಮಂಡಿಸಿ ವಿಷಯ ನ್ಯಾಯ ವ್ಯಾಪ್ತಿಗೆ ಒಳಪಟ್ಟಿದೆ. ರಿಟ್ ಅರ್ಜಿ ಉಳಿಸಿಕೊಳ್ಳಲಾಗುವುದಿಲ್ಲ ಎಂದು ಪರಿಗಣಿಸಲಾಗಿದೆ. ವಿಚಾರಣೆಯನ್ನು ಮುಂದೂಡಬೇಕು ಎಂದು ಮನವಿ ಮಾಡಿದರು. ಬಳಿಕ ನ್ಯಾಯಾಧೀಶರು ಪ್ರಕರಣವನ್ನು ಜುಲೈಗೆ ಮುಂದೂಡಿ ಆದೇಶಿಸಿದರು.