February 2, 2026
Monday, February 2, 2026
spot_img

ಬಜೆಟ್‌ನಲ್ಲಿ ರೈಲ್ವೆ ವಲಯಕ್ಕೆ ಎಷ್ಟು ಅನುದಾನ ಮೀಸಲು? ಕೇಂದ್ರ ರೈಲ್ವೆ ಅಶ್ವಿನಿ ವೈಷ್ಣವ್ ಕೊಟ್ರು ಮಾಹಿತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್

ಬಜೆಟ್‌ನಲ್ಲಿ ರೈಲ್ವೆ ವಲಯಕ್ಕೆ 2.78 ಲಕ್ಷ ಕೋಟಿ ಮೀಸಲಿಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್ ದಕ್ಷಿಣ ಹೈ-ಸ್ಪೀಡ್ ತ್ರಿಕೋನ ಅಥವಾ ದಕ್ಷಿಣ ಹೈ-ಸ್ಪೀಡ್ ಡೈಮಂಡ್ ಅನ್ನು ರೂಪಿಸಲಿವೆ. ಇದು ದಕ್ಷಿಣ ಭಾರತದ 5 ರಾಜ್ಯಗಳಿಗೆ ದೊಡ್ಡ ವರದಾನವಾಗಲಿದೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಕ್ಕೆ ಅನುಕೂಲವಾಗಲಿದೆ ಎಂದು ವಿವರಿಸಿದರು.

ಹೈಸ್ಪೀಡ್‌ ರೈಲು ಆಗಮನವಾದರೆ ಚೆನ್ನೈ-ಬೆಂಗಳೂರು ಪ್ರಯಾಣದ ಸಮಯ ಕೇವಲ 1 ಗಂಟೆ 13 ನಿಮಿಷಗಳಿಗೆ ಇಳಿಸಲಿದೆ. ಬೆಂಗಳೂರು-ಹೈದರಾಬಾದ್ ಕೇವಲ ಎರಡು ಗಂಟೆಗಳ ಪ್ರಯಾಣವಾಗಿರುತ್ತದೆ. ಚೆನ್ನೈ-ಹೈದರಾಬಾದ್ 2 ಗಂಟೆ 55 ನಿಮಿಷಗಳ ಪ್ರಯಾಣವಾಗಿರುತ್ತದೆ ಎಂದು ಹೇಳಿದರು.

ಈ ಹೈ-ಸ್ಪೀಡ್ ರೈಲು ಮಾರ್ಗ ರಚಿಸುವುದರಿಂದ ದಕ್ಷಿಣ ಭಾರತದ ರಾಜ್ಯಗಳ ಬೆಳವಣಿಗೆಯ ವೇಗ ಇನ್ನಷ್ಟು ಹೆಚ್ಚಾಗುತ್ತದೆ. ಇದು ದೇಶಕ್ಕೆ ಒಳ್ಳೆಯದು ಮತ್ತು ದಕ್ಷಿಣ ಭಾರತದ ಎಲ್ಲಾ ನಿವಾಸಿಗಳಿಗೂ ಅನುಕೂಲ ಎಂದು ಅಶ್ವಿನಿ ವೈಷ್ಣವ್‌ ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !