ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಅಧ್ಯಕ್ಷರಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನನ್ನು ನೇಮಕವಾಗಿದ್ದು, ರಾಜಕೀಯ ಚರ್ಚೆಗೆ ಅವಕಾಶ ಮಾಡಿಕೊಟ್ಟಿದೆ. ಈ ಕುರಿತು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೂಡ ಪ್ರತಿಕ್ರಿಯೆ ನೀಡಿದ್ದು, ನಾನು ಶಿಫಾರಸು ಪತ್ರ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಚುನಾವಣೆ ಮಾಡಿಕೊಂಡು ಆಯ್ಕೆ ಮಾಡಿಕೊಂಡಿದ್ದಾರೆ. ನಾನು ಯಾವುದೇ ಶಿಫಾರಸು ಪತ್ರ ಕೊಟ್ಟಿಲ್ಲ. ಆಯ್ಕೆ ಆಗಿರುವ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಸ್ಥಳೀಯ ಮುಖಂಡರ ಅಭಿಪ್ರಾಯದ ಮೇರೆಗೆ ಆಯ್ಕೆ ಆಗಿದೆ. ಈಗ ಆಗಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹೇಳಿದರು.
ಒಂದು ಬಾರಿ ಚುನಾವಣೆ ಆದ ಮೇಲೆ ಸ್ಥಾನದಿಂದ ಕೆಳಗಿಳಿಸಲು ಆಗುವುದಿಲ್ಲ. ಆದರೂ ಕೂಡ ಈ ಬಗ್ಗೆ ಮುಜರಾಯಿ ಇಲಾಖೆ ಸಚಿವರ ಜೊತೆ ಮಾತನಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.