ಅತ್ತ ಟೆಸ್ಟ್‌ ಕ್ರಿಕೆಟ್‌ಗೆ ಗುಡ್ ಬೈ…ಇತ್ತ ‘ಮಹಾ ಸಿಎಂ’ ಭೇಟಿ: ರಾಜಕೀಯ ಸೇರ್ತಾರಾ ರೋಹಿತ್‌ ಶರ್ಮ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ಕೆಲ ದಿನಗಳ ಹಿಂದಷ್ಟೇ ನಿವೃತ್ತಿ ಘೋಷಿಸಿದ್ದ ಭಾರತ ಕ್ರಿಕೆಟ್‌ ತಂಡದ ಅನುಭವಿ ಬ್ಯಾಟರ್‌ ರೋಹಿತ್‌ ಶರ್ಮ ಅವರು ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿ ಮಾಡಿದ್ದಾರೆ.

ಇತ್ತ ರೋಹಿತ್‌ ಶೀಘ್ರದಲ್ಲೇ ರಾಜಕೀಯಕ್ಕೆ ಸೇರುವ ಸಾಧ್ಯತೆ ಇದೆ ಎಂದು ಕೆಲ ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರದಂದು ರೋಹಿತ್ ಶರ್ಮಾ ಅವರು ದೇವೇಂದ್ರ ಫಡ್ನವೀಸ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ಈ ವೇಳೆ ರೋಹಿತ್‌ಗೆ ಫಡ್ನವೀಸ್ ಶಾಲು ಹೊದಿಸಿ, ಗೌರವಿಸಿ ಸನ್ಮಾನಿಸಿದ್ದರು. ಇದರ ಫೋಟೊವನ್ನು ಫಡ್ನವೀಸ್ ಟ್ವಿಟರ್‌ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

‘ನನ್ನ ಅಧಿಕೃತ ನಿವಾಸದಲ್ಲಿ ಭಾರತೀಯ ಕ್ರಿಕೆಟಿಗ ರೋಹಿತ್ ಶರ್ಮಾ ಅವರನ್ನು ಸ್ವಾಗತಿಸಲು, ಭೇಟಿಯಾಗಲು ಮತ್ತು ಸಂವಹನ ನಡೆಸಿದ್ದು ಸಂತೋಷವಾಯಿತು. ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ಅವರಿಗೆ ಮತ್ತು ಅವರ ಪ್ರಯಾಣದ ಮುಂದಿನ ಅಧ್ಯಾಯದಲ್ಲಿ ನಿರಂತರ ಯಶಸ್ಸಿಗೆ ನಾನು ಶುಭಾಶಯಗಳನ್ನು ಕೋರುತ್ತೇನೆ!’ ಎಂದು ಫಡ್ನವೀಸ್ ಪೋಸ್ಟ್‌ ಮಾಡಿದ್ದಾರೆ.

ಕಳೆದ ಬುಧವಾರದಂದು ಇನ್‌ಸ್ಟಾಗ್ರಾಂ ಸ್ಟೋರಿ ಮೂಲಕ ರೋಹಿತ್ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!