RA*PE | ಬೆಳಗಾವಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾ‍*ಚಾರ, ಇಬ್ಬರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಳಗಾವಿಯ ನಾನಾವಾಡಿಯಲ್ಲಿ 14 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ವಯಸ್ಕ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಬಾಲಕಿಯನ್ನು ಪುಸಲಾಯಿಸಿ, ನಗರದ ಹೊರವಲಯದ ಪ್ರದೇಶಕ್ಕೆ ಕರೆದೊಯ್ದಿರುವ ಬಾಲಕರು, ಪಾರ್ಟಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆ ಮೇ 6ರಂದು ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ಸಂಬಂಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಇದರ ಬೆನ್ನಲ್ಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಇದೀಗ ಇಬ್ಬರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಮತ್ತೋರ್ವನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!