ಹೆತ್ತ ಮಗಳನ್ನು ಸಾಕಲಿಲ್ಲ, ಮದುವೆಯೂ ಮಾಡಲಿಲ್ಲ: ತಂದೆಯ ಆರೋಪಕ್ಕೆ ಚೈತ್ರಾ ಕುಂದಾಪುರ ಗರಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚೈತ್ರಾ ಕುಂದಾಪುರ ಮದುವೆಗೆ ತನ್ನನ್ನು ಕರೆದಿಲ್ಲ ಮಾಧ್ಯಮದ ಮುಂದೆ ತಂದೆ ಬಾಲಕೃಷ್ಣ ನಾಯ್ಕ್ ಕಿಡಿಕಾರಿದ್ದರು. ತಂದೆಯ ಆರೋಪಕ್ಕೆಲ್ಲಾ ಚೈತ್ರಾ ತಿರುಗೇಟು ನೀಡಿದ್ದಾರೆ.

ಆಕೆ ನನ್ನನ್ನು ಮದುವೆಗೆ ಕರೆದಿಲ್ಲ. ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ ಎಂದು ಹೇಳಿದ್ದರು.

ಇನ್ನೂ, ತಂದೆಯ ಮಾತು ಕೇಳುತ್ತಿದ್ದಂತೆ ಚೈತ್ರಾ ಕುಂದಾಪುರ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ತಂದೆ ಬಗ್ಗೆಯೇ ಹೀಗೆ ಬರೆದುಕೊಂಡು ಶೇರ್ ಮಾಡಿಕೊಂಡಿದ್ದಾರೆ. ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ ಅಂತ ಬರೆದುಕೊಳ್ಳುವ ಮೂಲಕ ತಿರುಗೇಟು ಕೊಟ್ಟಿದ್ದಾರೆ.

ಹೆತ್ತ ಮಗಳನ್ನು ಸಾಕಲಿಲ್ಲ, ಫೀಸು ಕಟ್ಟಿ ಓದಿಸಲಿಲ್ಲ. ಹೆಣ್ಣು ಮಕ್ಕಳ ಜವಾಬ್ದಾರಿ ಹೊತ್ತು ಮದುವೆಯೂ ಮಾಡಲಿಲ್ಲ. ಕಟ್ಟಿಕೊಂಡ ಹೆಂಡ್ತಿಗೆ ಹೊಡೆದು ಚಿತ್ರಹಿಂಸೆ ಮಾಡಿದ್ದು ಬಿಟ್ಟರೆ ಬೇರೆ ಏನು ಇಲ್ಲ. ಎಲ್ಲಾ ಮುಗಿದ್ಮೇಲೆ ಅಪವಾದ ಹಾಕೋಕೆ ಮಾತ್ರ ತಂದೆ ಎನ್ನುವ ಹೆಸರು ವಾವ್ ಎಂದು ತಂದೆಯ ವಾಗ್ದಾಳಿಗೆ ಚೈತ್ರಾ ಕುಂದಾಪುರ ಪ್ರತ್ಯುತ್ತರ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here