ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಟ್ಯಾಂತರ ರೂಪಾಯಿ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಆರೋಪಿಸಿ ಶಾಸಕ ವಿನಯ್ ಕುಲಕರ್ಣಿ ಗೆ ಇಡಿ ಸಮನ್ಸ್ ಜಾರಿ ಮಾಡಿದ್ದು, ಇದನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಇಂದು ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬೇಡಿ ಎಂದು ಆದೇಶ ಹೊರಡಿಸಿದೆ.
ಈ ವೇಳೆ ಮಧ್ಯಂತರ ಆದೇಶಕ್ಕೆ ಇಡಿ ಪರ ಕೆಎಸ್‌ಜಿ ಅರವಿಂದ್ ಕಾಮತ್ ತೀವ್ರವಾದ ಆಕ್ಷೇಪ ವ್ಯಕ್ತಪಡಿಸಿದರು. ತಮ್ಮ ವಾದಕ್ಕೆ ಅವಕಾಶ ನೀಡದೆ ಮಧ್ಯಂತರ ಆದೇಶ ನೀಡಬಾರದು ಎಂದು ಇಡಿ ಸಲ್ಲಿಸಿದ ಲಿಖಿತ ಆಕ್ಷೇಪಣೆ ಪರಿಗಣಿಸಬೇಕು ಎಂದು ಮನವಿ ಮಾಡಿದರು.
ಆದರೆ ಹೈಕೋರ್ಟ್ ನ್ಯಾಯಾಧೀಶರಾದ ಶಿವಶಂಕರ್ ಅಮರಣ್ಣವರ್ ಅವರು, ಮಧ್ಯಂತರ ಆದೇಶಕ್ಕೆ ಇಡಿ ಆಕ್ಷೇಪಣೆ ಪರಿಗಣಿಸಲು ನಿರಾಕರಿಸಿದರು. ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಯಾವುದೇ ಬಲವಂತದ ಕ್ರಮ ಬೇಡ ಎಂದು ಆದೇಶ ಹೊರಡಿಸಿದರು.