ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಬೆನ್ನಲ್ಲೆ ದೇಶದೇಲ್ಲೆಡೆ ಭದ್ರತೆ ಹೆಚ್ಚಿಸಲಾಗಿದ್ದು ಮೈಸೂರು ಅರಮನೆಯ ಸುತ್ತಮುತ್ತಲು ಡ್ರೋನ್ ಹಾರಾಟ ನಿಷೇಧಿಸಿ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
ಭದ್ರತೆಯ ದೃಷ್ಟಿಯಿಂದ ವಿಶ್ವವಿಖ್ಯಾತ ಮೈಸೂರು ಅಂಬಾವಿಲಾಸ ಅರಮನೆ ಸುತ್ತ ಡ್ರೋನ್ ಹಾರಾಟ ನಿಷೇಧಿಸಿ ಅರಮನೆಯ ಆಡಳಿತ ಮಂಡಳಿಯ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಅರಮನೆಯ ನಾಲ್ಕು ಪ್ರಮುಖ ದ್ವಾರದಲ್ಲಿ ಪ್ರಕಟಣೆ ಫಲಕ ಹಾಕಿದ್ದಾರೆ.