ಮೇ 17ರಿಂದ ಮತ್ತೆ ಐಪಿಎಲ್ ಶುರು: ಜನರಿಗಾಗಿ ಮೆಟ್ರೋ ಸಮಯ ವಿಸ್ತರಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಮೇ 17ರಿಂದ ಐಪಿಎಲ್‌ನ ಕೊನೆಯ ಹಂತದ ಪಂದ್ಯಗಳು ಮತ್ತೆ ಆರಂಭಗೊಳ್ಳಲಿದೆ. ಈ ಹಿನ್ನೆಲೆ ಬೆಂಗಳೂರಿನ ಪಂದ್ಯಗಳ ಸಂದರ್ಭ ಸಾರ್ವಜನಿಕರ ಅನೂಕೂಲಕ್ಕಾಗಿ ನಮ್ಮ ಮೆಟ್ರೋ ಪಂದ್ಯಗಳ ದಿನ ಸಮಯಾವಧಿ ವಿಸ್ತರಣೆ ಮಾಡಿದೆ.

ಮೇ 17 ಮತ್ತು ಮೇ 23ರಂದು ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಯಲಿದೆ. ಈ ದಿನಗಳಲ್ಲಿ ನಮ್ಮ ಮೆಟ್ರೋ ಎಲ್ಲಾ ಟರ್ಮಿನಲ್ ಅಂದರೆ ವೈಟ್ ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ಮಧ್ಯರಾತ್ರಿ 1ರ ವರೆಗೆ ವಿಸ್ತರಿಸಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ ಮಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 1:35ಕ್ಕೆ ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ನಮ್ಮ ಮೆಟ್ರೋ ಕೋರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!