February 2, 2026
Monday, February 2, 2026
spot_img

ಬಾರಾಮುಲ್ಲಾ ,ಅಂಡಮಾನ್ & ನಿಕೋಬಾರ್ ದ್ವೀಪಗಳಲ್ಲಿ 4.6 ತೀವ್ರತೆಯ ಭೂಕಂಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 4.6 ತೀವ್ರತೆಯ ಭೂಕಂಪ ಸಂಭವಿಸಿದೆ.

ಭೂಮಿ ನಡುಗಿದ್ದರಿಂದ ಈ ಪ್ರದೇಶದ ಜನರಲ್ಲಿ ಭೀತಿ ಮನೆ ಮಾಡಿದೆ. ಬೆಳಗ್ಗೆ 5.35ರ ಸುಮಾರಿಗೆ ಕಂಪನದ ಅನುಭವವಾಗಿದ್ದು, ಅದರ ಕೇಂದ್ರಬಿಂದು ಪಟ್ಟನ್ ಪ್ರದೇಶದಲ್ಲಿದೆ. ಇಲ್ಲಿಯವರೆಗೆ, ಭೂಕಂಪದಿಂದ ಯಾವುದೇ ಸಾವು -ನೋವು ಗಾಯಗಳಾಗಿರುವ ಅಥವಾ ಹಾನಿ ಸಂಭವಿಸಿದ ವರದಿಗಳು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ -NCS ಈ ಬಗ್ಗೆ X ಪೋಸ್ಟ್‌ ಮಾಡಿದೆ. ಕಾಶ್ಮೀರದಲ್ಲಿ ಭೂಕಂಪ ಸಂಭವಿಸುವ ಎರಡು ಗಂಟೆಗಳ ಮೊದಲು, ಸೋಮವಾರ ಬೆಳಗಿನ ಜಾವ 3:30 ರ ಸುಮಾರಿಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಹೇಳಿಕೆಯ ಪ್ರಕಾರ, ಭೂಕಂಪವು 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಭೂಕಂಪದ ಅಕ್ಷಾಂಶವು 9.03 ಉತ್ತರ ಮತ್ತು ರೇಖಾಂಶವು 92.78 ಪೂರ್ವ ಎಂದು ವರದಿಯಾಗಿದೆ ಎಂದು X ಪೋಸ್ಟ್‌ನಲ್ಲಿ NCS ದಢಪಡಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ವಿಶ್ವದ ಅತ್ಯಂತ ಭೂಕಂಪನಶೀಲ ಸಕ್ರಿಯ ಪ್ರದೇಶಗಳಲ್ಲಿ ಒಂದಾಗಿದ್ದು, 1893-1984 ರಲ್ಲಿ ಭಾರತದ ಭೂಕಂಪನ ವಲಯ ನಕ್ಷೆಯ ಪ್ರಕಾರ ಭೂಕಂಪನ ವಲಯ – V ಎಂದು ವರ್ಗೀಕರಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !