ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನತೆ ಪ್ರಧಾನಿ ಮೋದಿಗೆ ಕ್ರೆಡಿಟ್ ಕೊಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ಯುದ್ಧದ ಕ್ರೆಡಿಟ್ ಸೈನಿಕರಿಗೆ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಜನರ ತೆರಿಗೆ ದುಡ್ಡಲ್ಲಿ 2 ಸಾವಿರ ಕೊಟ್ಟು ನಾನೇ ಕೊಟ್ಟೆ ನಾನೇ ಕೊಟ್ಟೆ ಅಂಥ ಯಾಕೆ ಹೇಳ್ತೀರಾ? ಅದರ ಕ್ರೆಡಿಟನ್ನು ತೆರಿಗೆದಾರರಿಗೆ ಯಾಕೆ ಕೊಡಲ್ಲ? ಎಲ್ಲದಕ್ಕೂ ನಾನೇ ನಾನೇ ಕೊಟ್ಟಿದ್ದು ಅಂಥ ಯಾಕೆ ಕೊಚ್ಚಿ ಕೊಳ್ತೀರಾ ಎಂದು ಪ್ರಶ್ನಿಸಿದ್ದಾರೆ.
ಯುದ್ಧದ ಕ್ರೆಡಿಟ್ ಸೈನಿಕರಿಗೆ ಸಿಗಬೇಕು. ಆದರೆ, ಜನ ಮೋದಿಯಂಥ ಗಟ್ಟಿ ನಾಯಕತ್ವಕ್ಕೆ ಕ್ರೆಡಿಟ್ ಕೊಡ್ತಿದ್ದಾರೆ ಅಷ್ಟೇ. ಇದೆಲ್ಲಾ ಜನ ಕೊಡುವ ಕ್ರೆಡಿಟ್‌ಗಳು. ಜನ ಮೋದಿಗೆ ಕ್ರೆಡಿಟ್ ಕೊಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ ಎಂದು ಕಿಡಿಕಾರಿದ್ದಾರೆ.