ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಇಸ್ಕಾನ್ ದೇವಾಲಯದ ಆಸ್ತಿ ಒಡೆತನದ ವಿವಾದಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದೆ. ಬೆಂಗಳೂರಿನ ಹರೇ ಕೃಷ್ಣ ಮಂದಿರ ಮತ್ತು ಶೈಕ್ಷಣಿಕ ಸಂಕೀರ್ಣದ ನಿಯಂತ್ರಣದ ಹೋರಾಟದಲ್ಲಿ ಸುಪ್ರೀಂ ಕೋರ್ಟ್ ಇಸ್ಕಾನ್ ದೇಗುಲದ ಪರವಾಗಿ ತೀರ್ಪು ನೀಡಿದೆ.
ನ್ಯಾ.ಅಭಯ್ ಎಸ್ ಓಕಾ ನೇತೃತ್ವದ ದ್ವಿಸದಸ್ಯ ಪೀಠವು ತೀರ್ಪು ಪ್ರಕಟಿಸಿದ್ದು, ಜಯ ಸಿಕ್ಕ ಸಂಭ್ರಮದಲ್ಲಿ ಬೆಂಗಳೂರಿನ ಇಸ್ಕಾನ್ ದೇವಸ್ಥಾನದಲ್ಲಿ ಭಕ್ತರು ಸಿಬ್ಬಂದಿ ಕುಣಿದು, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಮುಂಬೈ ಇಸ್ಕಾನ್ ಸಂಸ್ಥೆಯು ಬೆಂಗಳೂರಿನ ಇಸ್ಕಾನ್ ದೇವಾಲಯ ತನ್ನ ಶಾಕೆಯ ಭಾಗವೆಂದು ಹೇಳಿಕೊಂಡಿತ್ತು. ಈ ಕುರಿಯು ಮೊದಲು ಸಿಟಿ ಸಿವಿಲ್ ಕೋರ್ಟ್ ಮೆಟ್ಟಿಲೇರಿತ್ತು. ಆದ್ರೆ ಬೆಂಗಳೂರು ಇಸ್ಕಾನ್ ಸಂಸ್ಥೆಯು ಇದು ಸ್ವತಂತ್ರ ಸಂಸ್ಥೆ ಅಂತ ವಾದಿಸುತಲೇ ಬಂದಿತ್ತು. ಈ ಸಂಬಂಧ 2009ರಲ್ಲಿ ಸಿಟಿ ಸಿವಿಲ್ ಕೋರ್ಟ್ ಬೆಂಗಳೂರು ಇಸ್ಕಾನ್ ಸಂಸ್ಥೆ ಪರ ತೀರ್ಪು ನೀಡಿತ್ತು. 2009ರಲ್ಲಿ ಸಿಟಿ ಸಿವಿಲ್ ಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಮುಂಬೈ ಸಂಸ್ಥೆ ಮೇಲ್ಮನವಿ ಸಲ್ಲಿಸಿತ್ತು.