ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ವರುಣಾರ್ಭಟ ಜೋರಾಗಿದೆ.
ಕೆಲವು ಕಡೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ. ಇಂದು ಬೆಂಗಳೂರಿನ ಕೆಲವು ಕಡೆ ಮೋಡಕವಿದ ವಾತಾವರಣವಿದ್ದು, ಇನ್ನು ಕೆಲವು ಕಡೆಗಳಲ್ಲಿ ಮಳೆ ಶುರುವಾಗಿದೆ.
ಮಳೆ ಸುರಿದು, ರಸ್ತೆಗಳಲ್ಲಿ ನೀರು ನಿಂತ ಹಿನ್ನೆಲೆಯಲ್ಲಿ ಹಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರಿನಲ್ಲಿ ಮೇ 17 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.