ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಮೇ 20ಕ್ಕೆ ಎರಡು ವರ್ಷ ಪೂರ್ಣಗೊಳ್ಳಲಿದೆ. ಸರ್ಕಾರದ ಸಾಧನೆಗಳನ್ನು ತಿಳಿಸಲು ಮೇ 20ರಂದು ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೊಪ್ಪಳದ ಖಾಸಗಿ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಮಾವೇಶದಲ್ಲಿ ಮೂರು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗುವುದು. ಬೇರೆ ಇಲಾಖೆಗಳ ಕಾರ್ಯಕ್ರಮಗಳೂ ಇದರಲ್ಲಿವೆ ಎಂದರು.