ಹೊಸದಿಗಂತ ಚಿತ್ರದುರ್ಗ:
ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಹೊಳಲ್ಕೆರೆ ತಾಲ್ಲೂಕು ಚಿತ್ರಹಳ್ಳಿ ಗೇಟ್ ಬಳಿ ಶುಕ್ರವಾರ ರಾತ್ರಿ ಸುಮಾರು 9.30 ರ ಸುಮಾರಿಗೆ ನಡೆದಿದೆ.
ಮೃತರನ್ನು ಕಾವ್ಯ (24), ಗಂಗಮ್ಮ (50), ಹನ್ಸಿಕಾ (4) ಮತ್ತು ಮನಸ್ವಿನಿ (2) ಎಂದು ಗುರುತಿಸಲಾಗಿದೆ.
ಗಾಯಗೊಂಡಿರುವ ಯಶವಂತ (33) ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಹೊಳಲ್ಕೆರೆ ರೈಲ್ವೆ ಸ್ಟೇಷನ್ ಬಳಿಯ ಅರೇಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ.
ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.