ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಸೇನೆಯ ಆಪರೇಷನ್ ಸಿಂದೂರದ ಬಗ್ಗೆ ಪ್ರಶ್ನೆ ಮಾಡುವ ನಾಯಕರಿಗೆ ಸಿದ್ದರಾಮಯ್ಯ ಪಾಕಿಸ್ತಾನ ಪ್ರವಾಸ ಭಾಗ್ಯ ಕರುಣಿಸಲಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಪಾಕಿಸ್ತಾನದ ಒಳಗೆ, ಹೊರಗೆ ನಮ್ಮ ಸೇನೆ ಭಯೋತ್ಪಾದಕರನ್ನ, ತರಬೇತಿ ಕೇಂದ್ರಗಳನ್ನು ಹೊಡೆದಿದ್ದಾರೆ. ಅವರ ಕುಟುಂಬಕ್ಕೆ ಪಾಕಿಸ್ತಾನ ಸರ್ಕಾರ ಹಣ ಕೊಟ್ಟಿದೆ. ಈಗ ಅದಕ್ಕೆ ಸಾಕ್ಷಿ ಏನು ಅಂತ ಕಾಂಗ್ರೆಸ್ ಕೇಳುತ್ತಿದೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಬೇಕು. ಇಲ್ಲದೇ ಹೋದರೆ ನಾಯಕರಿಗೆ ಪಾಕಿಸ್ತಾನ ಪ್ರವಾಸ ಭಾಗ್ಯ ಕೊಡಿ ಎಂದು ಕಿಡಿಕಾರಿದ್ದಾರೆ.
ಪಾಕಿಸ್ತಾನ ವಿರುದ್ಧ ನಮ್ಮ ಸೈನಿಕರು ಹೋರಾಟ ಮಾಡಿದ್ದಾರೆ. ಇದರ ಬಗ್ಗೆ ಕಾಂಗ್ರೆಸ್ ನಿಲುವು ಏನು ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು. ಮಲ್ಲಿಕಾರ್ಜುನ ಖರ್ಗೆ ನಾವು ಬೆಂಬಲ ಕೊಡುತ್ತೇವೆ ಅಂದರು. ಈಗ ಬೇರೆ ಬೇರೆ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಬೇರೆ ಬೇರೆ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದು ಹೈಕಮಾಂಡ್ ಸೂಚನೆಯಾ ಎಂದು ಹೈಕಮಾಂಡ್ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.