ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆಪರೇಷನ್ ಸಿಂದೂರದ ಕುರಿತು ಭಾರತ ಸರ್ಕಾರ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದು ದೊಡ್ಡ ಅಪರಾಧ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಆಪರೇಷನ್ ಸಿಂದೂರ್ ಆರಂಭದಲ್ಲಿಯೇ ಭಾರತ ಪಾಕಿಸ್ತಾನಕ್ಕೆ ನೀಡಿದ ಮಾಹಿತಿಯ ಬಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಹೇಳಿಕೆಗಳನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, ಆಪರೇಷನ್ ಸಿಂದೂರ ಮುಗಿಯುವವರೆಗೂ ಕಾದು, ನಂತರ ಪಾಕಿಸ್ತಾನಕ್ಕೆ ತಿಳಿಸಬಹುದಾಗಿತ್ತು. ಆರಂಭಿಕ ಹಂತದಲ್ಲೇ ತಿಳಿಸಿದ್ದರಿಂದ ನಮ್ಮ ಸೇನಾಪಡೆಯ ಸೈನಿಕರು, ಯುದ್ಧವಿಮಾನಗಳಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಹೆಚ್ಚಾಗಿತ್ತು ಎಂದಿದ್ದಾರೆ.
‘ನಮ್ಮ ದೇಶದ ದಾಳಿಯ ಆರಂಭದಲ್ಲಿ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದು ಅಪರಾಧ. ಭಾರತ ಸರ್ಕಾರ ಅದನ್ನು ಮಾಡಿದೆ ಎಂದು ವಿದೇಶಾಂಗ ಸಚಿವಾಲಯ ಸಾರ್ವಜನಿಕವಾಗಿ ಒಪ್ಪಿಕೊಂಡಿದೆ. ಈ ರೀತಿಯಾಗಿ ಆರಂಭಿಕ ಹಂತದಲ್ಲೇ ಪಾಕಿಸ್ತಾನಕ್ಕೆ ಮಾಹಿತಿ ನೀಡಲು ಯಾರು ಆದೇಶ ನೀಡಿದರು? ಇದರ ಪರಿಣಾಮವಾಗಿ ನಮ್ಮ ವಾಯುಪಡೆ ಎಷ್ಟು ವಿಮಾನಗಳನ್ನು ಕಳೆದುಕೊಂಡಿತು? ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ನಡುವೆ ಭುಗಿಲೆದ್ದ ಉದ್ವಿಗ್ನತೆ ಬಗ್ಗೆ ರಾಹುಲ್ ಗಾಂಧಿ ಇಲ್ಲಿಯವರೆಗೆ ಮೌನವಾಗಿದ್ದರು.