ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೂರ್ವ ಮುಂಗಾರು ಮಳೆಗೆ ಬೆಂಗಳೂರು ತತ್ತರಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಒಂದೇ ಮಳೆಗೆ ರಸ್ತೆಗಳು ಹೊಂಡಗಳಾಗಿವೆ, ಹೊಂಡಗಳಲ್ಲಿ ನೀರು ತುಂಬಿದೆ. ಅಷ್ಟೇ ಅಲ್ಲದೆ ಅಲ್ಲಲ್ಲೆ ಮರಗಳು ಬಿದ್ದು ಟ್ರಾಫಿಕ್ ಜಾಮ್ ಕೂಡ ಆಗಿದೆ.
ಅಂಡರ್‌ಪಾಸ್‌ಗಳಲ್ಲಿ ನೀರು ತುಂಬುತ್ತಿದ್ದು, ಜನ ನಿನ್ನೆ ಮನೆ ಸೇರಲು ಹರಸಾಹಸ ಪಟ್ಟಿದ್ದಾರೆ.ವಿಧಾನಸೌಧ, ಎಂಜಿ ರೋಡ್, ಚಿನ್ನಸ್ವಾಮಿ ಸ್ಟೇಡಿಯಂ, ಕಾರ್ಪೊರೇಷನ್ ಸರ್ಕಲ್, ಹಲಸೂರು, ರೇಸ್ ಕೋರ್ಸ್, ಮೆಜೆಸ್ಟಿಕ್, ಶೇಷಾದ್ರಿಪುರಂ, ಮಲ್ಲೇಶ್ವರಂ ಸುತ್ತಮುತ್ತಲೂ ಮಳೆಯಾಗಿದೆ.
ಬನ್ನೇರುಘಟ್ಟ ಮುಖ್ಯರಸ್ತೆ ಮಳೆಯಿಂದ ಜಲಾವೃತಗೊಂಡಿದೆ. ಅರ್ಧ ಕಾರು ಮುಳುಗುವಷ್ಟರಮಟ್ಟಿಗೆ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಯಿತು. ಪಣತ್ತೂರು, ಕೋರಮಂಗಲ ರಸ್ತೆಯಲ್ಲೂ ನೀರು ನಿಂತು ಅವಾಂತರ ಸೃಷ್ಟಿಯಾಯಿತು. ರಣಭೀಕರ ಮಳೆಗೆ ಬೈಕ್, ಸ್ಕೂಟರ್‌ಗಳೇ ಮುಳುಗಡೆಯಾಗಿವೆ. ನೀರಿನಲ್ಲಿ ವಾಹನಗಳು ತೇಲಾಡಿವೆ.
ನಾಗವಾರದಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಜನರು ಪರದಾಡಿದರು. ಮನೆಯಲ್ಲಿದ್ದ ವಸ್ತುಗಳೆಲ್ಲಾ ಚಲ್ಲಾಪಿಲ್ಲಿಯಾಗಿದ್ದವು. ಮಳೆ ನಿಂತ ಬಳಿಕ ಮಳೆ ನೀರನ್ನ ಹೊರಹಾಕಿದರು. ಯಲಹಂಕದ ಸಾಯಿಲೇಔಟ್ ಮತ್ತೆ ಜಲಾವೃತಗೊಂಡಿದೆ.