March 18, 2026
Wednesday, March 18, 2026
spot_img

ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಕುರಿತು ಗೊಂದಲ: ಸ್ಪಷ್ಟನೆ ನೀಡಿದ ಹೈಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ನಿಷೇಧ ವಿಚಾರವಾಗಿ ಉಂಟಾಗಿದ್ದ ಕೆಲ ಗೊಂದಲಗಳಿಗೆ ಹೈಕೋರ್ಟ್ ತೆರೆ ಎಳೆದಿದೆ.

ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿಲ್ಲ ಎಂದು ಸಿಜೆ ವಿಭು ಬಕ್ರು ಮತ್ತು ನ್ಯಾ. ಸಿ.ಎಂ.ಜೋಶಿ ಅವರಿದ್ದ ಪೀಠ ಸ್ಪಷ್ಟನೆ ನೀಡಿದೆ.

ಆ ಮೂಲಕ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲಾಗಿದೆ ಎನ್ನುವ ಸುದ್ದಿಗೆ ಸ್ಪಷ್ಟನೆ ಸಿಕ್ಕಿದ್ದು, ಬೈಕ್ ಟ್ಯಾಕ್ಸಿ ನಿಷೇಧ ವಿಚಾರ ಇನ್ನೂ ಕೋರ್ಟ್​​ನಲ್ಲಿ ವಿಚಾರಣೆ ಹಂತದಲ್ಲಿದ್ದು, ಹೀಗಾಗಿ ಮುಂದೆ ಕೋರ್ಟ್ ಯಾವ ತೀರ್ಪು ನೀಡಲಿದ ಎನ್ನುವುದನ್ನು ಕಾದುನೋಡಬೇಕಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ಇಂದು ನಡೆದ ವಿಚಾರಣೆ ನಡೆದಿದ್ದು, ಈ ವೇಳೆ ರಾಜ್ಯದಲ್ಲಿ ನಿಷೇಧವಿದ್ದರೂ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡಲಾಗಿದೆ ಎಂದು ಅಡ್ವೊಕೇಟ್‌ ಜನರಲ್ ಕೆ. ಶಶಿಕಿರಣ್‌ ಶೆಟ್ಟಿ ಮಾಹಿತಿ ನೀಡಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿಲ್ಲ. ಬೈಕ್ ಟ್ಯಾಕ್ಸಿ ಪ್ರಸ್ತಾವನೆ ಬಗ್ಗೆ ಸರ್ಕಾರ ಪರಿಶೀಲಿಸುತ್ತಿರುವ ಹಿನ್ನೆಲೆ ಬೈಕ್ ಟ್ಯಾಕ್ಸಿ ಮಾಲೀಕರು, ಚಾಲಕರ ಮೇಲೆ ಕ್ರಮ ಬೇಡವೆಂದು ಹೇಳಿದ್ದೆವು. ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ಕಂಪನಿಗಳ ಬಗ್ಗೆ ನಾವು ಹೇಳಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !