ಹೊಸದಿಗಂತ ಡಿಜಿಟಲ್ ಡೆಸ್ಕ್:
ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಆಭರಣ ಅಂಗಡಿಯಲ್ಲಿ ಇಂದು ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 8 ಮಕ್ಕಳು ಸೇರಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಕಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿ ಮೃತರ ಪ್ರತಿ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ತೆಲಂಗಾಣದ ಹೈದರಾಬಾದ್ನಲ್ಲಿ ಸಂಭವಿಸಿದ ಬೆಂಕಿ ದುರಂತದಿಂದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಮೃತರ ಪ್ರತಿ ಕುಟುಂಬಕ್ಕೂ ಪಿಎಮ್ಎನ್ಆರ್ಎಫ್ ನಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿರಬಹುದು ಎಂದು ತಿಳಿದುಬಂದಿದೆ. ಘಟನೆಯ ನಿಖರವಾದ ಕಾರಣವನ್ನು ಕಂಡುಹಿಡಿಯಲು ವಿವರವಾದ ತನಿಖೆ ನಡೆಯುತ್ತಿದೆ.