ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದು, ಹವಾಮಾನ ಇಲಾಖೆ ಮುಂದಿನ 12 ಗಂಟೆಗಳಲ್ಲಿ ಭಾರಿ ಮಳೆಯಾಗುವುದಾಗಿ ಎಚ್ಚರಿಸಿದೆ. ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್ ವೃತ್ತ, ಮಾರ್ಕೆಟ್, ಮೆಜೆಸ್ಟಿಕ್, ಜಯನಗರ, ಚಾಮರಾಜಪೇಟೆ, ವಿಜಯನಗರ, ಚಂದ್ರಾಲೇಔಟ್ ಹಾಗೂ ರಾಜಾಜಿನಗರ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಆರ್.ಆರ್. ನಗರ, ನಾಯಂಡಹಳ್ಳಿ, ಬಿಟಿಎಮ್ ಲೇಔಟ್, ಯಶವಂತಪುರ, ಪೀಣ್ಯ ಮೈಕೋ ಲೇಔಟ್ ಮತ್ತು ಬೊಮ್ಮನಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದೆ.
ಮೇ 21ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆ ಸುರಿಯಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಂದು ಮತ್ತು ನಾಳೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.