ಬೆಂಗಳೂರಿನ ಮಂದಿಗೆ ಮಳೆ ಅಬ್ಬರ ತಡೆಯೋಕಾಗ್ತಿಲ್ಲ! ಎಲೆಕ್ಟ್ರಾನಿಕ್‌ ಸಿಟಿ ಫ್ಲೈ ಓವರ್‌ ಬಂದ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಗೆ ಜನರು ಹೈರಾಣಾಗಿದ್ದಾರೆ. ಸಂಜೆ ಮಳೆಗೆ ಜನ ಹೈರಾಣಾಗಿದ್ದು, ರಸ್ತೆಗಳೆಲ್ಲ ಹೊಂಡಗಳಾಗಿವೆ.

ಎಲೆಕ್ಟ್ರಾನಿಕ್‌ ಸಿಟಿ ಫ್ಲೈ ಓವರ್‌ನಲ್ಲಿ ನೀರು ನಿಂತ ಹಿನ್ನೆಲೆಯಲ್ಲಿ ಸಂಚಾರವನ್ನು ಬಂದ್‌ ಮಾಡಲಾಗಿದೆ. ಧಾರಾಕಾರ ಮಳೆಗೆ ಬೆಂಗಳೂರು ತತ್ತರವಾಗಿದ್ದು, ಮೆಜೆಸ್ಟಿಕ್, ಕೆ ಆರ್ ಮಾರುಕಟ್ಟೆ, ಜಯನಗರ, ವಿಜಯನಗರ, ಚಂದ್ರಲೇಔಟ್, ರಾಜಾಜಿನಗರ, ಆರ್ ಟಿ ನಗರ, ಹೆಬ್ಬಾಳ, ಕೋರಮಂಗಲ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಯಶವಂತಪುರ, ಪೀಣ್ಯ, ಬೊಮ್ಮನ ಹಳ್ಳಿ, ನಾಯಂಡಹಳ್ಳಿ, ಕುಮಾರಸ್ವಾಮಿ ಲೇಔಟ್‌, ಆರ್ ಆರ್ ನಗರ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ. ಶಿವಾನಂದ ಸರ್ಕಲ್  ಅಂಡರ್ ಪಾಸ್ ಮುಳುಗಡೆಯಾಗಿದೆ.

ಸಾಯಿ ಲೇಔಟ್ ಜನರು ಸಂಕಷ್ಟ ಅನುಭವಿಸಿದ್ದು ರಾತ್ರಿಯಿಡೀ ಸುರಿದ ಮಳೆಗೆ ಲೇಔಟ್ ಪೂರ್ತಿ ಜಲಾವೃತವಾಗಿದೆ. ಮೊಣಕಾಲವರೆಗೂ ನೀರು ತುಂಬಿದ್ದು ಜನ ಆಕ್ರೋಶ ಹೊರಹಾಕಿದ್ದಾರೆ. ಮನೆಯ ಒಳಗಡೆಯೂ ನೀರು ತುಂಬಿದ್ದು ವಸ್ತುಗಳು ಚೆಲ್ಲಾಪಿಲ್ಲಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!