ಬೆಂಗಳೂರು ಮಳೆ ಸಮಸ್ಯೆ ಹೊಸತಲ್ಲ, ನಾನು ನಿಮ್ಮ ಜೊತೆ ಇದ್ದೇನೆ : ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಮಳೆ ಸಮಸ್ಯೆ ಹೊಸತಲ್ಲ, ನಾನು ನಿಮ್ಮ ಜೊತೆ ಇದ್ದೇನೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಕೆ.ಶಿವಕುಮಾರ್  ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಉಂಟಾದ ಹಾನಿಯಿಂದ ತೀವ್ರ ಕಳವಳಗೊಂಡಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಸವಾಲುಗಳನ್ನು ಎದುರಿಸಲು ಮತ್ತು ಪರಿಹಾರವನ್ನು ಕೈಗೊಳ್ಳುವ ದಿನದ 24 ಗಂಟೆಗಳೂ ನಾನು ಕೆಲಸ ಮಾಡುತ್ತಿದ್ದೇನೆಂದು ಹೇಳಿದ್ದಾರೆ.

ನಾನು ಬಿಬಿಎಂಪಿ ವಾರ್ ರೂಮ್ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ ವಾಸ್ತವಿಕ ಮಾಹಿತಿ ಪಡೆಯುತ್ತೇನೆ. ಇವತ್ತು ನಾವು ಎದುರಿಸುತ್ತಿರುವ ಸಮಸ್ಯೆಗಳು ಹೊಸದೇನಲ್ಲ. ಹಲವು ಸರ್ಕಾರಗಳ, ಹಲವು ವರ್ಷಗಳ ನಿರ್ಲಕ್ಷ್ಯತನದಿಂದ ಈ ಸಮಸ್ಯೆ ಎದುರಿಸುತ್ತಿದ್ದೇವೆ. ಈ ಸಮಸ್ಯೆ ಪರಿಹರಿಸಲು ಕೆಲಸ ಮಾಡಲಾಗುತ್ತಿದೆ. ತಾತ್ಕಾಲಿಕ ಪರಿಹಾರವಲ್ಲದೆ, ದೀರ್ಘಕಾಲಿಕ ಪರಿಹಾರ ಕೈಗೊಳ್ಳು ಕೆಲಸ ಮಾಡುತ್ತಿದ್ದೇವೆಂದು ತಿಳಿಸಿದ್ದಾರೆ.

ಬೆಂಗಳೂರಿಗರೇ, ನಾನು ನಿಮ್ಮಲ್ಲಿ ಒಬ್ಬ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ. ನಿಮ್ಮ ಕಳವಳ ಅರ್ಥಮಾಡಿಕೊಳ್ಳುತ್ತೇನೆ. ಹತಾಶೆಯನ್ನು ಹಂಚಿಕೊಳ್ಳುತ್ತೇನೆ. ಬೆಂಗಳೂರಿನ ಈ ಸಮಸ್ಯೆಯನ್ನು ಪರಿಹರಿಸಲು ನಾನು ಬದ್ಧನಾಗಿದ್ದು, ಈ ಬಗ್ಗೆ ನಾನು ಭರವಸೆ ನೀಡುತ್ತೇನೆ. ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!