ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾವು ಎಲ್ಲಿಯೂ ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳೂ ಕೊಡ್ತೀವಿ ಅಂತ ಹೇಳಿಲ್ಲ ಎಂದುಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಲ್ಟಾ ಹೊಡೆದಿದ್ದಾರೆ.
ಬಳ್ಳಾರಿಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ ಕುರಿತ ಸುದ್ದಿಗೋಷ್ಠಿಯಲ್ಲಿ, ಗೃಹಲಕ್ಷ್ಮಿ ಹಣ ಯಾವಾಗ ಬರುತ್ತೆ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು.ನಾವು ದುಡ್ಡು ಕೊಡ್ತಾ ಇರಬೇಕು. ಈಗ ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆನೇ ಹಣ ಬಂದುಬಿಡುತ್ತಾ? 2, 3, 5 ವರ್ಷ ಆಗುತ್ತೆ ಅಲ್ವಾ.. ಅದೇ ರೀತಿ ಇದೂ ಕೂಡ ಬಂದಾಗ ಬರುತ್ತೆ ಅಂತ ಹಾರಿಕೆ ಉತ್ತರ ನೀಡಿದ್ದಾರೆ.