ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಲ್ಲಿ ಭಾರೀ ಮಳೆ ಆಗುತ್ತಿದ್ದು, ಪ್ರಮುಖ ರಸ್ತೆಗಳೆಲ್ಲವೂ ಸಂಪೂರ್ಣವಾಗಿ ಮಳೆ ನೀರಿನಿಂದ ತುಂಬಿಕೊಂಡು ನದಿಯಂತೆ ಆಗಿವೆ. ಇತ್ತ ಬೃಹತ್ ಗಾತ್ರದ ಮರ ಒಂದು ಉರುಳಿ ಬಿದ್ದಿದೆ.
ಮೇಖ್ರಿ ಸರ್ಕಲ್, ಸದಾಶಿವನಗರ, ಶಿವಾಜಿನಗರ, ವಸಂತನಗರ, ಹೈಗ್ರೌಂಡ್ಸ್, ವಿಧಾನಸೌಧ, ಸೆಂಟ್ರಲ್ ಸಿಲ್ಕ್ ಬೋರ್ಡ್, ಚಾಮರಾಜಪೇಟೆ, ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್, ಮೈಸೂರು ರೋಡ್, ವಿಜಯನಗರ, ರಾಜಾಜಿನಗರ, ಮಲ್ಲೇಶ್ವರಂ, ಮಹಾಲಕ್ಷ್ಮಿ ಲೇಔಟ್, ಶೇಷಾದ್ರಿಪುರಂ, ಚಿಕ್ಕಪೇಟೆ, ಅರಮನೆ ಮೈದಾನ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದೆ.
ಇನ್ನೂ ಅರಮನೆ ಮೈದಾನದ ಮುಂಭಾಗದ ರಸ್ತೆಯ ಪ್ಯಾಲೆಸ್ ಗುಟ್ಟಹಳ್ಳಿ ಬಳಿ ದೊಡ್ಡಬಳ್ಳಾಪುರ-ಬೆಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮೇಲೆ ಮರವೊಂದು ಉರುಳಿ ಬಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ.