ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ಗೆ​ ನಿಂದನೆ ಆರೋಪ: ಸಿಟಿ ರವಿ ವಿರುದ್ಧದ ಕೇಸ್ ಗೆ ಸುಪ್ರೀಂಕೋರ್ಟ್ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ಗೆ​ ನಿಂದನೆ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ಬೆಳಗಾವಿ ಅಧಿವೇಶನದ ವೇಳೆ ಅವಾಚ್ಯ ಪದದಿಂದ ನಿಂದನೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್​ ಅವರು ದೂರು ನೀಡಿದ್ದರು. ಆದ್ರೆ, ಈ ದೂರು ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದ ಸಿಟಿ ರವಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಶಾಸಕ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್​​ ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಟಿ ರವಿ ಅವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಇಂದು(ಮೇ 19) ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್ ಮತ್ತು ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ಸುಪ್ರೀಂಕೋರ್ಟ್​ ಪೀಠ, ಸಿ.ಟಿ. ರವಿ ವಿರುದ್ಧ ವಿಚಾರಣಾ ಪ್ರಕ್ರಿಯೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!