ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗುತ್ತಿದ್ದು ಟಾಸ್ ಗೆದ್ದ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಪ್ರತಿಯೊಂದು ಪಂದ್ಯವೂ ಮಾಡು ಇಲ್ಲವೇ ಮಡಿ ಎಂಬಂತಹ ಸನ್ನಿವೇಶವಾಗಿದೆ. ಹೈದರಾಬಾದ್ ವಿರುದ್ಧ ದೊಡ್ಡ ಅಂತರದಿಂದ ಗೆಲ್ಲುವ ಮೂಲಕ ಪ್ಲೇಆಫ್ ತಲುಪುವ ಭರವಸೆಯನ್ನು ತಂಡವು ಜೀವಂತವಾಗಿರಿಸಿಕೊಳ್ಳಲು ಬಯಸುತ್ತದೆ.
ಲಕ್ನೋ ಸೂಪರ್ ಜೈಂಟ್ಸ್: ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ರಿಷಭ್ ಪಂತ್ (ವಿಕೆಟ್/ನಾಯಕ), ಆಯುಷ್ ಬಡೋನಿ, ಅಬ್ದುಲ್ ಸಮದ್, ಆಕಾಶ್ ದೀಪ್, ಅವೇಶ್ ಖಾನ್, ರವಿ ಬಿಷ್ಣೋಯ್, ದಿಗ್ವೇಶ್ ಸಿಂಗ್ ರಾಥಿ, ವಿಲಿಯಂ ಓ’ಆರ್
ಸನ್ರೈಸರ್ಸ್ ಹೈದರಾಬಾದ್:: ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್, ಅನಿಕೇತ್ ವರ್ಮಾ, ಕಮಿಂದು ಮೆಂಡಿಸ್, ಪ್ಯಾಟ್ ಕಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಹರ್ಷ್ ದುಬೆ, ಇಶಾನ್ ಅನ್ಸಾರಿ, ಇಶಾನ್ ಅನ್ಸಾರಿ