ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಮಾಜಿ ಅಧ್ಯಕ್ಷ ಜೋ ಬೈಡನ್ ಪ್ರಾಸ್ಟೇಟ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಈ ಸುದ್ದಿ ತಿಳಿದ ಕೂಡಲೇ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿ, ಶೀಘ್ರವೇ ಗುಣಮುಖರಾಗುವಂತೆ ಶುಭ ಹಾರೈಸಿದ್ದಾರೆ.
82 ವರ್ಷದ ಬೈಡನ್ ಅವರಿಗೆ ಮೂತ್ರ ವಿಸರ್ಜನೆಯಲ್ಲಿ ಸಮಸ್ಯೆ ಉಂಟಾಗಿತ್ತು. ವೈದ್ಯರು ತಪಾಸಣೆ ಮಾಡಿದ ಬಳಿಕ ಮೂಳೆಗಳಿಗೆ ಕ್ಯಾನ್ಸರ್ ಹರಡಿದ್ದು, ಪ್ರಾಸ್ಟೇಟ್ ಕ್ಯಾನ್ಸರ್ ಇರುವುದಾಗಿ ಶುಕ್ರವಾರ ತಿಳಿಸಿದ್ದಾರೆ. ಭಾನುವಾರ ಈ ಕುರಿತು ಬೈಡನ್ ಕಚೇರಿಯು ಕ್ಯಾನ್ಸರ್ ಇರುವುದು ಪತ್ತೆಯಾಗಿದೆ ಎಂದು ಪ್ರಕಟಿಸಿದೆ.
ವಿಷಯ ತಿಳಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದುಃಖ ವ್ಯಕ್ತಪಡಿಸಿದ್ದು, ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಕಳವಳ ವ್ಯಕ್ತಪಡಿಸಿದ್ದು, ಬೈಡನ್ ಆರೋಗ್ಯ ಚೆನ್ನಾಗಿರಲಿ. ಶೀಘ್ರವೇ ಸಂಪೂರ್ಣವಾಗಿ ಗುಣಮುಖರಾಗಲಿ ಎಂದು ಆಶಿಸಿದ್ದಾರೆ.