ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಭಿಷೇಕ್ ಶರ್ಮಾ ಸ್ಫೋಟಕ ಅರ್ಧಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವು 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ.
ಇನ್ನೂ ಕಳಪೆ ಬೌಲಿಂಗ್ ಪ್ರದರ್ಶನದಿಂದಾಗಿ ಸೋಲು ಕಂಡ ಲಕ್ನೋ ಸೂಪರ್ ಜೈಂಟ್ಸ್ 18ನೇ ಆವೃತ್ತಿಯ ಐಪಿಎಲ್‌ನ ಪ್ಲೇ ಆಫ್ ರೇಸ್‌ನಿಂದಲೇ ಹೊರಬಿದ್ದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆರಂಭಿಕ ಆಟಗಾರರ ಉತ್ತಮ ಪ್ರದರ್ಶನದ ನೆರವಿನಿಂದ 20 ಓವರ್‌ಗಳ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತ್ತು. 206 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ 18.2 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 2೦6 ರನ್ ಗಳಿಸಿ ಗೆಲುವು ಸಾಧಿಸಿತು.